ಭದ್ರಾ ಮೇಲ್ದಂಡೆ ಯೋಜನೆಗೆ 5, 300 ಕೋಟಿ ರೂಪಾಯಿ ಅನುದಾನ ನೀಡಿದ್ದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (PRAHALAD JOSHI) ಯವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5, 300 ಕೋಟಿ ರೂಪಾಯಿ ಅನುದಾನ ನೀಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು, ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮ್ ಅವರು ಹಾಗೂ ಜಲ ಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಈ ಅನುದಾನವೂ ಯೋಜನೆಯ ಅನುಷ್ಠಾನಕ್ಕೆ ಬಲ ನೀಡಲಿದ್ದು, ಮಧ್ಯ ಕರ್ನಾಟಕ ಭಾಗದ ಬರಪೀಡಿತ ಪ್ರದೇಶಗಳ ನೀರಿನ ಸಮಸ್ಯೆಯನ್ನು ಬಗೆಹರಿಸಲಿದೆ ಎಂದು ಹೇಳಿದ್ದಾರೆ.
ಇದನ್ನುಓದಿ :- ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಇಟ್ಟಿದ್ದೀವಿ ಅಂತಾರೆ – ಯಾಕೆ ಇನ್ನೂ ಕಾಮಗಾರಿ ಆರಂಭವಾಗಿಲ್ಲ – ಡಿ.ಕೆ ಶಿವಕುಮಾರ್