ಯಾವ ಸ್ಥಳದಿಂದ ರಾಹುಲ್ ಗಾಂಧಿಗೆ ಸಂಸದ ಸ್ಥಾನ ಹೋಗಿದೆಯೋ ಅದೇ ಸ್ಥಳದಿಂದ ಬೃಹತ್ ಹೋರಾಟ ಆರಂಭಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ಏಪ್ರಿಲ್ 5 ರಂದು ರಾಹುಲ್ ಗಾಂಧಿ ಅವರು ಅದೇ ಕೋಲಾರಕ್ಕೆ ಬಂದು ಗಾಂಧೀಜಿ ಅವರ ಮೂಲ ಮಂತ್ರವಾದ ಸತ್ಯ ಮೇಯ ಜಯತೆ ಹೋರಾಟವನ್ನು ದೇಶದುದ್ದಗಲಕ್ಕೆ ಆರಂಭಿಸುತ್ತಿದ್ದಾರೆ. ನಾವು ಇಲ್ಲಿಂದಲೇ ಹೋರಾಟ ಆರಂಭಿಸಲು ಮನವಿ ಮಾಡಿದ್ದು, ಅವರು ಇಲ್ಲಿಗೆ ಆಗಮಿಸುತ್ತಿದ್ದಾರೆ.
ರಾಹುಲ್ ಗಾಂಧಿ ಅವರು ಎಲ್ಲಿ ಭಾಷಣ ಮಾಡಿದರೋ ಅದೇ ಭೂಮಿಯಿಂದ ಮತ್ತೆ ಪ್ರಜಾಪ್ರಭುತ್ವ ಉಳಿಸುವ, ರಾಜ್ಯ ಹಾಗೂ ದೇಶದಲ್ಲಿ ಹೊಸ ಬದಲಾವಣೆ ಗಾಳಿ ಬೀಸಲು ಹೋರಾಟ ಮಾಡಲಿದ್ದಾರೆ. ಬಿಜೆಪಿ ಅಧಿಕಾರ ದುರ್ಬಳಕೆ ಪ್ರಜಾಪ್ರಭುತ್ವಕ್ಕೆ ಅಪಮಾನವಾಗಿದೆ. ರಾಹುಲ್ ಗಾಂಧಿ ಅವರು ದೇಶದಾದ್ಯಂತ ಪಾದಯಾತ್ರೆ ಮಾಡಿ ಜನರ ಮನ ಗೆದ್ದಿರುವುದಕ್ಕೆ ಬಿಜೆಪಿಯವರು ಈ ಸ್ಥಿತಿ ತಂದಿದ್ದಾರೆ ಎಂದು ಹೇಳಿದರು.