ವೋಟಿಗಾಗಿ ಶಾದಿಮಹಲ್ ನಿರ್ಮಾಣ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (SIDDARAMAIAH) ಹೇಳಿದ್ದಾರೆ. ರಾಮನಗರ (RAMANAGARA) ಜಿಲ್ಲೆಯ ಮಾಗಡಿ(MAGADI) ಯಲ್ಲಿ ಶಾದಿಮಹಲ್ ಉದ್ಘಾಟಿಸಿ ಮಾತನಾಡಿದ ಅವರು, ಬಡವರಿಗೆ ಅನುಕೂಲವಾಗಲಿ ಅಂತಾ ಶಾದಿಮಹಲ್ ನಿರ್ಮಾಣ ಮಾಡಮಾಗಿದೆ.
ಶಾದಿ ಮಹಲ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಇಂದು ರಾಮನಗರ ಜಿಲ್ಲೆಯ ಮಾಗಡಿಗೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು ಪ್ರೀತಿಯಿಂದ ಬರಮಾಡಿಕೊಂಡರು.
ತಮ್ಮ ಪ್ರೀತಿ, ಅಭಿಮಾನಕ್ಕೆ ನಾನು ಸದಾ ಋಣಿ. pic.twitter.com/A43JwmWDba— Siddaramaiah (@siddaramaiah) January 29, 2023
ನಾನು ಸಿಎಂ ಆಗಿದ್ದಾಗ ಶಾದಿಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಆದರೆ ಇದೀಗ ಬಿಜೆಪಿ ಸರ್ಕಾರ ನಿಲ್ಲಿಸಿದೆ ಎಂದು ಹೇಳಿದರು. ಕಾಂಗ್ರೆಸ್ (CONGRESS)ಅಧಿಕಾರಕ್ಕೆ ಬಂದರೆ ರೈತರಿಗೆ ಬೆಂಬಲ ಬೆಲೆ 5-6 ರೂಪಾಯಿ ಹೆಚ್ಚಳ ಮಾಡಲಾಗುವುದು. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಅನುದಾನ ಕೊಡುತ್ತೇವೆ. ಬಿಜೆಪಿ ಆಡಳಿತದಲ್ಲಿ ಜನರು ಜೀವನ ಮಾಡುವುದೇ ಕಷ್ಟವಾಗಿದೆ ಎಂದರು.
ಕುಮಾರಸ್ವಾಮಿ ಹೇಳಿದ ಅಂತಾ ಹೊಸ ಪಕ್ಷ ಕಟ್ಟಲು ಹೋಗಲಾ..? ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಬಿಜೆಪಿ ಜತೆ ಹೋದವರ್ಯಾರು?, JDSಗೆ ಯಾವುದೇ ತತ್ವ ಸಿದ್ಧಾಂತ ಇಲ್ಲ. ಜೆಡಿಎಸ್ ಪಕ್ಷ ಕಾಂಗ್ರೆಸ್ ನ ವೋಟ್ ವಿಭಜಿಸಲು ಪ್ರಯತ್ನಿಸುತ್ತಿದೆ. ನಮ್ಮ ವೋಟ್ ಒಡೆದು ಬಿಜೆಪಿಗೆ ಅನುಕೂಲ ಮಾಡಲು ಹೊರಟಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಇದನ್ನು ಓದಿ :- ನನಗೆ 80 ವಯಸ್ಸಾಗ್ತಿದೆ ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ – ಬಿ.ಎಸ್ ಯಡಿಯೂರಪ್ಪ