ದಾವಣಗೆರೆ : ನೆರೆ ರಾಜ್ಯ ಕೇರಳ ಬಳಿಕ ಕರ್ನಾಟಕದಲ್ಲೂ ಕೋವಿಡ್ ಭೀತಿ ಶುರುವಾಗಿದೆ. ಇದೀಗ ದಾವಣಗೆರೆ ಜಿಲ್ಲೆಯಲ್ಲಿ ಒಬ್ಬರಲ್ಲಿ ಕೊರೊನಾ ಪತ್ತೆಯಾಗಿದೆ. ಆದರೆ ಇದು ಹೊಸ ಜೆಎನ್-1 ತಳಿಯಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ವೃದ್ಧರೊಬ್ಬರು ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದು, ಸುಸ್ತು ಕಾಣಿಸಿಕೊಂಡಾಗ ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಕೋವಿಡ್ ಪತ್ತೆಯಾಗಿದೆ. ಡಿ. 25ರ ರಾಜ್ಯ ಬುಲೆಟಿನ್‌ನಲ್ಲಿ ತೋರಿಸಲಾಗಿದೆ. ಯಾವುದೇ ತೊಂದರೆ ಇಲ್ಲ. ಸುರಕ್ಷಿತವಾಗಿದ್ದಾರೆ’ ಎಂದು ಡಿಎಚ್‌ಒ ಡಾ.ಷಣ್ಮುಖಪ್ಪ ತಿಳಿಸಿದರು.
ಡಿ.25ರಂದು 97 ಜನರನ್ನು ಪರೀಕ್ಷೆಗೆ ಒಳಪಡಿಸಿದಾಗ ಒಂದು ಪ್ರಕರಣ ಪತ್ತೆಯಾಗಿದೆ. ಡಿ.26ರಂದು 180 ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಎಲ್ಲವೂ ನೆಗೆಟಿವ್ ಬಂದಿವೆ. ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಎದುರಿಸಲು ಬೆಡ್ ವ್ಯವಸ್ಥೆ, ಕೋವಿಡ್ ಕೇರ್ ಸೆಂಟರ್‌ಗಳನ್ನು ಮೂಲಸೌಲಭ್ಯಗಳ ಜೊತೆ ಸಿದ್ಧಪಡಿಸಿ ಇಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.