World Cup 2023 : ಹೈವೋಲ್ಟೇಜ್ ಏಕದಿನ ವಿಶ್ವಕಪ್ನ ಭಾರತ v/s ಪಾಕಿಸ್ತಾನ್ ಕ್ರಿಕೆಟ್ ಡೇಟ್ ಪಿಕ್ಸ್ ಆಗಿದ್ದು, ಅಕ್ಟೋಬರ್ 14 ರಂದು ಅಹಮದಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ್ ನಡುವಣ ಕ್ರಿಕೆಟ್ ಪಂದ್ಯ ನಡೆಯಲಿದೆ ಎಂದು ವರದಿಯಾಗಿದೆ.
ಈ ಹಿಂದೆ ಬಿಡುಗಡೆ ಮಾಡಿದ್ದ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 15 ರಂದು ಈ ಪಂದ್ಯ ನಡೆಯಬೇಕಿತ್ತು. ಆದರೆ ಅಕ್ಟೋಬರ್ 15 ರಿಂದ ನವರಾತ್ರಿಯೂ ಪ್ರಾರಂಭವಾಗುವುದರಿಂದ ಸೂಕ್ತ ಭದ್ರತೆ ಬಗ್ಗೆ ಪೊಲೀಸರು ಕಳವಳ ವ್ಯಕ್ತಪಡಿಸಿದ ಹಿನ್ನೆಲೆ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಇದೀಗ ಅಕ್ಟೋಬರ್ 15 ರ ಪಂದ್ಯದ ಬದಲು ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯುವುದು ಸೂಕ್ತ ಎಂದು ಬಿಸಿಸಿಐ ನಿರ್ಧರಿಸಿದೆ.