Sports News

ಬಿಜೆಪಿ ಸರ್ಕಾರದಲ್ಲಿ ಲಂಚ ಕೊಡದಿದ್ದರೆ ಯಾವ ಕೆಲಸ ಆಗಲ್ಲ – ಮಾಜಿ ಸಿಎಂ ಸಿದ್ದರಾಮಯ್ಯ

ಬಿಜೆಪಿ (BJP)ಸರ್ಕಾರದಲ್ಲಿ ಲಂಚ ಕೊಡದಿದ್ದರೆ ಯಾವ ಕೆಲಸ ಆಗಲ್ಲ. ಡಿಸಿಪಿ, SP ಪೋಸ್ಟಿಂಗ್ ಗೂ ಲಂಚ ಕೊಡಬೇಕು.

ಬಿಜೆಪಿ (BJP)ಸರ್ಕಾರದಲ್ಲಿ ಲಂಚ ಕೊಡದಿದ್ದರೆ ಯಾವ ಕೆಲಸ ಆಗಲ್ಲ. ಡಿಸಿಪಿ, SP ಪೋಸ್ಟಿಂಗ್ ಗೂ ಲಂಚ ಕೊಡಬೇಕು. ಎಲ್ಲಾ ಕಡೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹೀಗಾಗಿ ಬೆಂಗಳೂರಿನಾದ್ಯಂತ ಮೌನ ಪ್ರತಿಭಟನೆ ಮಾಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (SIDDARAMAIAH)ವಾಗ್ದಾಳಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಾವು 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಬಿಜೆಪಿಗೆ ಭಯ ಇದೆ, ಹೀಗಾಗಿ ಬಿಬಿಎಂಪಿ ಚುನಾವಣೆ ಮಾಡುತ್ತಿಲ್ಲ ಎಂದು ಕಾಲೆಳೆದರು.

Did 'Bharat Jodo Yatra' serve any purpose other than Cong's classic 'divide  & rule politics'? Sudhakar asks | Deccan Herald
ಕಾಂಗ್ರೆಸ್ ವಿರುದ್ಧ ಸಚಿವ.ಕೆ.ಸುಧಾಕರ್ (K.SUDHAKAR) ಭ್ರಷ್ಟಾಚಾರ ಆರೋಪ ಹೊರಿಸಿದ ವಿಚಾರವಾಗಿ ಮಾತನಾಡಿದ ಅವರು, ಸಚಿವ ಡಾ.ಕೆ.ಸುಧಾಕರ್ ಈ ಹಿಂದೆ ಯಾವ ಪಕ್ಷದಲ್ಲಿ ಇದ್ದರು..? ಕೊರೊನಾ ಸಮಯದಲ್ಲಿ ಲೂಟಿ ಮಾಡಿದ್ದು ಸುಧಾಕರ್ ತಾನೆ? ನಮ್ಮ ಮುಖ ಚೆನ್ನಾಗಿದೆ, ಕನ್ನಡಿಯಲ್ಲಿ ನಿಮ್ಮ ಮುಖ ನೋಡಿಕೊಳ್ಳಿ. 60 ವರ್ಷ ನಾವು ಲೂಟಿ ಮಾಡಿದ್ರೆ ತನಿಖೆ ಮಾಡಿಸಿ ಎಂದು ಹೇಳಿದರು. ಇದನ್ನು ಓದಿ :-  ಕೇರಳದ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ಚಿನ್ನ ಎಷ್ಟಿದೆ ಗೊತ್ತಾ..?

BJP forms five-member team for 2024 Lok Sabha elections
40% ಅಲ್ಲ 50 ಪರ್ಸೆಂಟ್ ಬೆಂಗಳೂರಿನಲ್ಲಿ ಭ್ರಷ್ಟಾಚಾರ ನಡೆದಿದೆ
ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಹೀಗಾಗಿ ಬೆಂಗಳೂರಿನಲ್ಲಿ ನಮ್ಮ ಹೋರಾಟ ಮುಂದುವರೆದಿದೆ. 40% ಅಲ್ಲ 50 ಪರ್ಸೆಂಟ್ ಬೆಂಗಳೂರಿನಲ್ಲಿ ಭ್ರಷ್ಟಾಚಾರ ನಡೆದಿದೆ. ಕಾಂಗ್ರೆಸ್ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಅಂತಾ ಹೇಳುತ್ತಿದ್ದಾರೆ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದಾಗ ಏನು ಮಾಡುತ್ತಿದ್ದರು? ವಿಪಕ್ಷದ ಸ್ಥಾನದಲ್ಲಿ ಕುಳಿತು ಬಿಜೆಪಿಯವರು ಏನು ಮಾಡುತ್ತಿದ್ದರು..? ಭ್ರಷ್ಟಾಚಾರ ಆಗದಿದ್ರೆ ಕೆಂಪಣ್ಣ ಯಾಕೆ ಮೋದಿಗೆ ಪತ್ರ ಬರೆಯುತ್ತಿದ್ದರು? ಎಂದು ಪ್ರಶ್ನೆ ಮಾಡಿದರು.


ಕೋಲಾರದಲ್ಲಿ ನನಗೆ ಆಶೀರ್ವಾದ ಮಾಡುತ್ತಾರೆ
ಕೋಲಾರ(KOLARA)ದಲ್ಲಿ ನನಗೆ ಆಶೀರ್ವಾದ ಮಾಡುತ್ತಾರೆ. ಸಂತೋಷ್ ಸ್ಟ್ಯಾಟರ್ಜಿ ಮಾಡೋದಲ್ಲ ಅವರೆ ಬಂದು ನಿಂತಿಕೊಳ್ಳಲಿ. ಬಾದಾಮಿಯಲ್ಲಿ ನನ್ನ ಸೋಲಿಸಲು ಪಿತೂರಿ ನಡೆಸಿದ್ದರು. ಈಗಲು ಕೂಡ ಅದನ್ನೇ ಮುಂದುವರೆಸಿದ್ದಾರೆ. ಆದರೆ ಕೋಲಾರ ಜನ ನಮಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ಇದನ್ನು ಓದಿ :-  ಪಂತ್ ಆದಷ್ಟು ಬೇಗ ಗುಣಮುಖರಾಗಲಿ – ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ ಸೂರ್ಯ, ಕುಲ್ ದೀಪ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!