ICC ನೂತನ ಅಧ್ಯಕ್ಷರಾಗಿ ಎರಡನೇ ಬಾರಿ ಗ್ರೆಗ್ ಬಾರ್ಕ್ಲೇ ಆಯ್ಕೆ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಎರಡನೇ ಬಾರಿ ನೂತನ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ (GREG BARCLAY) ಆಯ್ಕೆಯಾಗಿದ್ದಾರೆ. ICC ಬೋರ್ಡ್ ಸದಸ್ಯರ ಒಮ್ಮತದ ಆಯ್ಕೆಯಾಗಿ ಎರಡನೇ ಬಾರಿ ಗ್ರೆಗ್ ಬಾರ್ಕ್ಲೇ ಆಯ್ಕೆಯಾದರು.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಎರಡನೇ ಬಾರಿ ನೂತನ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ (GREG BARCLAY) ಆಯ್ಕೆಯಾಗಿದ್ದಾರೆ. ICC ಬೋರ್ಡ್ ಸದಸ್ಯರ ಒಮ್ಮತದ ಆಯ್ಕೆಯಾಗಿ ಎರಡನೇ ಬಾರಿ ಗ್ರೆಗ್ ಬಾರ್ಕ್ಲೇ ಆಯ್ಕೆಯಾದರು. ಈ ಮೂಲಕ 2020ರ ಬಳಿಕ 2022ರಲ್ಲಿ ಮತ್ತೊಮ್ಮೆ ಅಧ್ಯಕ್ಷರಾಗಿ 2 ವರ್ಷಗಳ ಅಧಿಕಾರವಧಿಯನ್ನು ಹಿಡಿದಿದ್ದಾರೆ.

2024ರ ವರೆಗೆ ಗ್ರೆಗ್ ಬಾರ್ಕ್ಲೇ ಅಧ್ಯಕ್ಷರಾಗಿರಲಿದ್ದಾರೆ. 2015ರ ICC ಏಕದಿನ ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ನ ಡೈರೆಕ್ಷರ್ ಆಗಿ ಕೆಲಸ ಮಾಡಿದ್ದ ಗ್ರೆಗ್ ಬಾರ್ಕ್ಲೇ, ನಾರ್ಥನ್ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನ್ ಸದಸ್ಯರು ಆಗಿದ್ದರು. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನ ಹಲವು ಕಂಪನಿಗಳಲ್ಲಿ ಬೋರ್ಡ್ ನ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ ಅಪಾರ ಅನುಭವ ಇವರಿಗಿದೆ. ಇದೀಗ ಎರಡನೇ ಬಾರಿ ICC ಅಧ್ಯಕ್ಷರಾಗಿ ಮುನ್ನಡೆಸುವ ಹೊಣೆ ಹೊತ್ತಿದ್ದಾರೆ.

ಇದನ್ನೂ ಓದಿ : – T-20 ವಿಶ್ವಕಪ್- ಬಲಿಷ್ಠ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಫೈನಲ್ ಗೆ ಲಗ್ಗೆ ಇಟ್ಟ ಪಾಕಿಸ್ತಾನ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!