ಕ್ರಿಕೆಟ್ ಜಗತ್ತಿನ ಅತ್ಯಂತ ಶ್ರೀಮಂತ ಲೀಗ್ ಟೂರ್ನಿ ಎರಡು ವರ್ಷಗಳ ನಂತರ ಭಾರತಕ್ಕೆ ಮರಳಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಟಿ20 ಕ್ರಿಕೆಟ್ ಟೂರ್ನಿ 15ನೇ ಆವೃತ್ತಿಯ ರೋಚಕ ಕಾದಾಟಕ್ಕೆ ಇಂದಿನಿಂದ ಚಾಲನೆ ಸಿಗಲಿದೆ.
ಹಲವು ಬದಲಾವಣೆಗಳೊಂದಿಗೆ ಹೊಸ ನಾಯಕ, ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ ಐಪಿಎಲ್ ತಂಡಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇಂದು ರವೀಂದ್ರ ಜಡೇಜಾ (Ravindra Jadeja) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK ) ಮತ್ತು ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಕಾದಾಡುವ ಮೂಲಕ ಈ ಅದ್ಧೂರಿ ಲೀಗ್ಗೆ ಭರ್ಜರಿ ಚಾಲನೆ ಸಿಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣ ಈ ಹೈವೋಲ್ಟೇಜ್ ಕದನಕ್ಕೆ ಸಂಪೂರ್ಣ ಸಾಕ್ಷಿಯಾಗಲಿದೆ. ಮೈದಾನದಲ್ಲಿ ಕುಳಿತುಕೊಂಡು ಪಂದ್ಯ ವೀಕ್ಷಣೆ ಮಾಡಲು ಶೇ. 25ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಲಾಗಿದೆ.
ಇದನ್ನು ಓದಿ :- CSK ತಂಡಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ – ರವೀಂದ್ರ ಜಡೇಜಾ ನೂತನ ನಾಯಕ
ಕೋವಿಡ್ ಸೃಷ್ಟಿಸಿದ ಬಿಕ್ಕಟ್ಟಿನಿಂದಾಗಿ 2020ರಲ್ಲಿ ಟೂರ್ನಿಯು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆದಿತ್ತು. 2021ರ ಏಪ್ರಿಲ್‌ನಲ್ಲಿ ಭಾರತದ ನಡೆಯುತ್ತಿದ್ದ ಟೂರ್ನಿಯನ್ನು ಕೋವಿಡ್ ಎರಡನೇ ಅಲೆ ವ್ಯಾಪಿಸಿದ್ದ ಕಾರಣಕ್ಕಾಗಿ ಸ್ಥಗಿತಗೊಳಿಸಿ, ಉಳಿದ ಭಾಗವನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು. ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಟೂರ್ನಿಯನ್ನ ಆಯೋಜಿಸಲಾಗಿದೆ.
ಇದನ್ನು ಓದಿ :- ಕಪಿಲ್ ದೇವ್ ದಾಖಲೆ ಸರಿಗಟ್ಟಿದ ಜಸ್ ಪ್ರೀತ್ ಬುಮ್ರಾ