ಕ್ರಿಕೆಟ್ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tenudlkar) ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಿದ್ದಾರೆ.
ಅಲ್ಲೇ ತಮ್ಮ ಕ್ರಿಕೆಟ್ ಅಭ್ಯಾಸ ಮುಂದುವರಿಸಿದ್ದಾರೆ. ಕೌಂಟಿ ಕ್ರಿಕೆಟ್ ನಲ್ಲಿ ಅಭ್ಯಾಸ ಮುಂದುವರಿಸಿರುವ ಆಲ್ರೌಂಡರ್ ಅರ್ಜುನ್ ತೆಂಡೂಲ್ಕರ್ ತಂಡವೊಂದರ ಪರ ಕಣಕ್ಕಿಳಿಯುವ ಮೂಲಕ ಗಮನ ಸೆಳೆದಿದ್ದಾರೆ. ಕೌಂಟಿ ಕ್ರಿಕೆಟ್ ತಂಡಗಳ ನಡುವೆ ನಡೆದ ಸೌಹಾರ್ದ ಪಂದ್ಯದಲ್ಲಿ ಅರ್ಜುನ್ ಮಿಡ್ಲ್ಸೆಕ್ಸ್ ತಂಡದ ಪರ ಕಣಕ್ಕಿಳಿದಿದ್ದರು. 50 ಓವರ್ಗಳ ಈ ಪಂದ್ಯದಲ್ಲಿ ಮಿಡ್ಲ್ಸೆಕ್ಸ್ ಸೆಕೆಂಡ್ ಇಲೆವೆನ್ ಮತ್ತು ಕ್ಲಬ್ ಕ್ರಿಕೆಟ್ ಕಾನ್ಫರೆನ್ಸ್ ಇಲೆವೆನ್ ಮುಖಾಮುಖಿಯಾಗಿತ್ತು. ಇದನ್ನೂ ಓದಿ :- ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್..!
ಈ ಪಂದ್ಯದಲ್ಲಿ ಮಿಡ್ಲ್ಸೆಕ್ಸ್ ಪರ ಎಡಗೈ ಮಧ್ಯಮ ವೇಗಿಯಾಗಿ ಕಾಣಿಸಿಕೊಂಡ ಅರ್ಜುನ್ ತೆಂಡೂಲ್ಕರ್ 4 ಓವರ್ಗಳನ್ನು ಬೌಲ್ ಮಾಡುವ ಅವಕಾಶವನ್ನು ಪಡೆದಿದ್ದಾರೆ. ಈ ವೇಳೆ ಕೇವಲ 16 ರನ್ ನೀಡಿ ಒಂದು ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ಕೌಂಟಿ ಕ್ರಿಕೆಟ್ನಲ್ಲಿ ತೊಡಗಿಸಿಕೊಂಡಿರುವ ಅರ್ಜುನ್ ತೆಂಡೂಲ್ಕರ್ ಮುಂದಿನ ಸೀಸನ್ ಐಪಿಎಲ್ ( IPL )ಮೂಲಕ ಪಾದಾರ್ಪಣೆ ಮಾಡುವ ವಿಶ್ವಾಸದಲ್ಲಿದ್ದಾರೆ.
ಇದನ್ನೂ ಓದಿ :- ಪಿ ವಿ ಸಿಂಧು ಮಡಿಲಿಗೆ ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಕಪ್