ಶೋಯೆಬ್ ಮಲಿಕ್, ಸಾನಿಯಾ ಮಿರ್ಜಾ ವಿಚ್ಛೇದನ..?

ಭಾರತದ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ( saniya mirja ) ಹಾಗೂ ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್ ಎರಡೂ ದೇಶಗಳಲ್ಲಿ ಅತಿ ಹೆಚ್ಚು ಚರ್ಚೆಗೊಳಗಾದ ಜೋಡಿ ಎಂದರೆ ತಪ್ಪಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ದಂಪತಿ ದೂರವಾಗುತ್ತಿರುವ ಬಗ್ಗೆ ಭಾರೀ ಅನುಮಾನ ಹುಟ್ಟಿಕೊಂಡಿದೆ.

ಸಾನಿಯಾ ಮಿರ್ಜಾ ಇತ್ತೀಚೆಗೆ ಹಂಚಿಕೊಂಡ ಪೋಸ್ಟ್ ಒಂದು ಅವರಿಬ್ಬರ ವಿಚ್ಛೇದನದ (Divorce) ಬಗ್ಗೆ ಭಾರೀ ಚರ್ಚೆಗೆ ಕಾರಣವಾಗಿದೆ. ಸಾನಿಯಾ ಹಾಗೂ ಶೋಯೆಬ್ 2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಆದರೆ ಸಾನಿಯಾ ಭಾರತೀಯಳಾಗಿದ್ದು ಶೋಯೇಬ್ ಪಾಕಿಸ್ತಾನಿ ಎಂಬ ವಿಚಾರಕ್ಕೆ ವಿವಾದವೂ ಉಂಟಾಗಿತ್ತು.

12 ವರ್ಷಗಳ ದಾಂಪತ್ಯ ಜೀವನದ ಬಳಿಕ ಇದೀಗ ಅವರಿಬ್ಬರ ನಡುವೆ ಬಿರುಕು ಬಿದ್ದಿರುವ ಬಗ್ಗೆ ವರದಿಯಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಸಾನಿಯಾ ಇತ್ತೀಚೆಗೆ ಇನ್ ಸ್ಟಾ ಗ್ರಾಮ್ ನಲ್ಲಿ ಒಗಟಿನ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ‘ಒಡೆದ ಹೃದಯಗಳು ಎತ್ತ ಸಾಗುತ್ತಿವೆ? ಅಲ್ಲನನ್ನು ಹುಡುಕಲು’ ಎಂದು ಬರೆದಿದ್ದಾರೆ. ಇದನ್ನೂ ಓದಿ : –   ಹಿಂದೂ ಪದದ ಅರ್ಥ ಅಸಭ್ಯ – ತಮ್ಮ ಹೇಳಿಕೆಗೆ ವಿಡಿಯೋ ಮೂಲಕ ಸ್ಪಷ್ಟನೆ ಕೊಟ್ಟ ಸತೀಶ್ ಜಾರಕಿಹೊಳಿ


12 ವರ್ಷಗಳ ಹಿಂದೆ ಜೋಡಿಗಳು ತಮ್ಮ ನಿಶ್ಚಿತಾರ್ಥದ ಬಗ್ಗೆ ಘೋಷಣೆ ಮಾಡಿದಾಗ ಭಾರೀ ಚರ್ಚೆಗೆ ಕಾರಣರಾಗಿದ್ದರು. ಭಾರತವನ್ನು ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಟೆನ್ನಿಸ್ ತಾರೆ ಪಾಕಿಸ್ತಾನಿಯನ್ನು ಯಾಕೆ ಮದುವೆಯಾಗಬೇಕೆಂಬ ಟೀಕೆಗಳೂ ಹರಿದಿತ್ತು. ಆದರೆ ಇದೀಗ ಇವರಿಬ್ಬರ ವಿಚ್ಛೇದನದ ಬಗ್ಗೆ ವರದಿಯಾಗಿದ್ದು, ಮತ್ತೆ ಟೀಕೆಗೊಳಗಾಗುತ್ತಿದ್ದಾರೆ.

ಇದನ್ನೂ ಓದಿ : –  ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಮಾತನಾಡಿದ್ದು ತಪ್ಪು, ಕೂಡಲೇ ಹಿಂಪಡೆಯಬೇಕು – ಡಿಕೆಶಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!