ಅರಬ್ಬರ ನಾಡಿನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಟೂರ್ನಿ ಯಲ್ಲಿ ಕೂಟದ ಬಲಿಷ್ಠ ತಂಡ ಲಿಯೋನೆಲ್ ಮೆಸ್ಸಿ ಸಾರಥ್ಯದ ಅರ್ಜೆಂಟೀನಾ ವಿರುದ್ಧ ಸೌದಿ ಅರೇಬಿಯಾ 2-1 ಗೋಲುಗಳ ಅಂತರದ ಜಯ ಸಾಧಿಸಿ ಮೆರೆದಾಡಿದೆ. ಈ ಬೆನ್ನಲ್ಲೇ ಸೌದಿ ಅರೇಬಿಯಾದಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು, ಇಂದು ರಾಷ್ಟ್ರೀಯ ರಜೆ ಘೋಷಿಸಿ ಸಂಭ್ರಮಿಸುತ್ತಿದೆ.
ಯಶಸ್ವಿ ತಂಡ 2 ಬಾರಿ ವಿಶ್ವಕಪ್ ಎತ್ತಿಹಿಡಿದಿದ್ದ ಲಿಯೋನೆಲ್ ಮೆಸ್ಸಿ ನಾಯಕತ್ವದ ಅರ್ಜೆಂಟೀನಾ ವಿರುದ್ಧ ಸೌದಿ ಅರೇಬಿಯಾ 2-1 ಅಂತರದ ಗೋಲುಗಳಿಂದ ಗೆಲುವು ಸಾಧಿಸಿ ಮಿಂಚಿದೆ. ಈ ಬೆನ್ನಲ್ಲೇ ಸೌದಿ ಅರೇಬಿಯಾದ ದೊರೆ ಸಲ್ಮಾನ್ ಬಿನ್ ಅಬ್ದುಲಜೀಜ್ ಅರ್ಜೆಂಟೀನಾ ವಿರುದ್ಧದ ವಿಜಯವನ್ನು ಆಚರಿಸಲು ಬುಧವಾರ ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿದ್ದಾರೆ. ಇದನ್ನೂ ಓದಿ : – ನಾನು ಬಳಸಿದ ಪದ ಸ್ವತಃ ನನಗೂ ನೋವುಂಟು ಮಾಡಿದೆ – ಹೆಚ್.ಡಿ ಕುಮಾರಸ್ವಾಮಿ
ಕತಾರ್ ನ ಲುಸೈಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ತಂಡ ಗೆಲುವಿನ ಫೇವರಿಟ್ ತಂಡವಾಗಿ ಕಾಣಿಸಿಕೊಂಡಿತ್ತು. ಆದರೆ ಇತ್ತ ಅದ್ಭುತ ಪ್ರದರ್ಶನದ ಮೂಲಕ ಸೌದಿ ಅರೇಬಿಯಾ ಫುಟ್ ಬಾಲ್ ಅಭಿಮಾನಿಗಳ ಮನಗೆದ್ದಿದೆ. ಪಂದ್ಯದ 10ನೇ ನಿಮಿಷದಲ್ಲಿ ಮೆಸ್ಸಿ ಗೋಲಿನೊಂದಿಗೆ ಅರ್ಜೆಂಟೀನಾಗೆ 1-0 ಮುನ್ನಡೆ ತಂದುಕೊಟ್ಟರು. ಈ ವೇಳೆ ಅಭಿಮಾನಿಗಳು ಫುಟ್ ಬಾಲ್ ದಿಗ್ಗಜನ ಆಟಕ್ಕೆ ಚಪ್ಪಾಳೆ ತಟ್ಟಿ ಹುರಿದುಂಬಿಸಿದರು.
ಇದನ್ನೂ ಓದಿ : – ರಮೇಶ್ ಕುಮಾರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹೆಚ್ಡಿಕೆ – ವಿಡಿಯೋ ವೈರಲ್