ಪಾಕ್ ವಿರುದ್ಧ ಗೆಲುವಿನ ಬಳಿಕ ಅನುಷ್ಕಾಗೆ ಕೃತಜ್ಞತೆ ಸಲ್ಲಿಸಿದ ವಿರಾಟ್ ಕೊಹ್ಲಿ

ಟಿ20 ( T20 ) ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದ ಮೊದಲ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ( virat kohli ) ಪಾಕಿಸ್ತಾನ ವಿರುದ್ಧ ಭಾರತಕ್ಕೆ 4 ವಿಕೆಟ್ ಅಂತರದ ರೋಚಕ ಗೆಲುವು ತಂದುಕೊಟ್ಟರು.

ಟಿ20 ( T20 ) ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದ ಮೊದಲ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ( virat kohli ) ಪಾಕಿಸ್ತಾನ ವಿರುದ್ಧ ಭಾರತಕ್ಕೆ 4 ವಿಕೆಟ್ ಅಂತರದ ರೋಚಕ ಗೆಲುವು ತಂದುಕೊಟ್ಟರು.

ಈ ಇನಿಂಗ್ಸ್ ಬಗ್ಗೆ ಕೊಹ್ಲಿ ಅವರ ನಟಿ ಅನುಷ್ಕಾ ಶರ್ಮಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಂದ್ಯದ ಬಳಿಕ ಕೊಹ್ಲಿಯ ಚಿತ್ರವನ್ನು ಹಂಚಿಕೊಂಡಿರುವ ಅನುಷ್ಕಾ, ನೀನು ಈ ರಾತ್ರಿ ಜನರಲ್ಲಿ ಸಾಕಷ್ಟು ಸಂತಸವನ್ನು ತಂದಿರುವೆ. ಅದೂ ದೀಪಾವಳಿ ಮುನ್ನಾ ದಿನ ಎಂದು ಬರೆದುಕೊಂಡಿದ್ದಾರೆ.


ನೀನು ನನ್ನ ಅದ್ಭುತ. ನಿನ್ನ ಸ್ಥೈರ್ಯ, ತ್ಯಾಗ ಮತ್ತು ವಿಶ್ವಾಸ ಎಂತಹವರನ್ನೂ ಚಕಿತಗೊಳಿಸುತ್ತದೆ. ನಾನು ನನ್ನ ಜೀವನದಲ್ಲೇ ಅತ್ಯುತ್ತಮ ಪಂದ್ಯವನ್ನು ನೋಡಿದೆ ಎಂದು ಹೇಳಬಲ್ಲೆ. ತನ್ನ ತಾಯಿ ಯಾಕೆ ರೂಮಿನಲ್ಲಿ ಕುಣಿದಾಡುತ್ತಿದ್ದಾಳೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ನಮ್ಮ ಮಗಳು ಇನ್ನೂ ಚಿಕ್ಕವಳು. ಆದರೆ ಆ ರಾತ್ರಿ ಅವಳ ಅಪ್ಪ ಅತ್ಯಂತ ಕಠಿಣ ಸಂದರ್ಭದಲ್ಲಿ, ತನ್ನ ಮೇಲೆ ಅಪಾರ ಹೊರೆ ಇದ್ದಾಗಲೂ ಇಂದೆಂದಿಗಿಂತ ಹೆಚ್ಚು ಪ್ರಬಲವಾಗಿ ಮತ್ತು ಪ್ರಬುದ್ಧವಾಗಿ ಸವಾಲನ್ನು ಮೀರಿ ಹೊರ ಬಂದಿದ್ದರು. ಇದನ್ನೂ ಓದಿ : –  ಮುಖ್ಯಮಂತ್ರಿಯಾಗುವ ಅವಕಾಶವಿದ್ದ ಸಂದರ್ಭದಲ್ಲಿ ಕೊರಟಗೆರೆ ಜನ ನನ್ನ ಕೈಬಿಟ್ಟರು – ಡಾ ಜಿ ಪರಮೇಶ್ವರ್

ವೃತ್ತಿ ಜೀವನದ ಅತ್ಯುತ್ತಮ ಇನಿಂಗ್ಸ್ ಆಡಿದ್ದರು ಎಂಬುದನ್ನು ಮುಂದೊಂದು ದಿನ ಅರ್ಥ ಮಾಡಿಕೊಳ್ಳುತ್ತಾಳೆ. ನಾನು ತುಂಬಾ ಹೆಮ್ಮೆ ಪಡುತ್ತಿದ್ದೇನೆ’ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೊಹ್ಲಿ, ಪ್ರತಿಯೊಂದು ಕ್ಷಣದಲ್ಲೂ ನನ್ನ ಜೊತೆಗೆ ಇದ್ದುದ್ದಕ್ಕಾಗಿ ನನ್ನ ಪ್ರೀತಿಗೆ ಧನ್ಯವಾದಗಳು. ನಾನು ತುಂಬಾ ಕೃತಜ್ಞನಾಗಿದ್ದೇನೆ. ನಿನ್ನನ್ನು ತುಂಬಾ ಪ್ರೀತಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ : –  ನರಕ ಚತುದರ್ಶಿ ನಿಮಿತ್ತ ಮಂತ್ರಾಲಯದಲ್ಲಿ ವಿಶೇಷ ಪೂಜೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!