ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ತಿನ ಹಾಲಿ ಕಾಂಗ್ರೆಸ್ ಸದಸ್ಯ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆತರುವ ಪ್ರಯತ್ನ ಗಂಭೀರವಾಗಿ ಆರಂಭವಾಗಿದೆ. ಶೆಟ್ಟರ್ ಜತೆ ಮಾತುಕತೆ ನಡೆಸಬಹುದು ಎಂಬ ಹಸಿರು ನಿಶಾನೆಯನ್ನು ಪಕ್ಷದ ವರಿಷ್ಠರು ರಾಜ್ಯ ನಾಯಕರಿಗೆ ನೀಡಿದ್ದು, ಶೀಘ್ರದಲ್ಲೇ ಮಾತುಕತೆ ಪ್ರಕ್ರಿಯೆಗೆ ಚಾಲನೆ ಸಿಗುವ ನಿರೀಕ್ಷೆಯಿದೆ.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದೆ. ಲೋಕಸಮರದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ನಾಯಕರು, ಈ ಹಿಂದೆ ಕಾಂಗ್ರೆಸ್ ಸೇರ್ಪಡೆಯಾದ ನಾಯಕರನ್ನ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನಗಳಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಹಿಂದೆ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಅವರು ಮತ್ತೆ ಬಿಜೆಪಿ ಜಗದೀಶ್ ಶೆಟ್ಟರ್ ಬರುತ್ತಾರೆ ಎಂದು ಹೇಳಿದ್ದಾರೆ. ಅಲ್ಲದೇ ಬಿಜೆಪಿ ಪಾಳಯದಲ್ಲೂ ಈ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದ್ದು, ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಆಗುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಚಿವ ಪರಮೇಶ್ವರ್ ಉತ್ತರ ನೀಡಿದ್ದಾರೆ.