State News

ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಸಾವಿರ ಕೋಟಿ ಅವ್ಯವಹಾರ : ಯತ್ನಾಳ್

ವಿಜಯಪುರ : ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಕೋವಿಡ್‌ ವೇಳೆ ₹45 ಮೌಲ್ಯದ ಒಂದು ಮಾಸ್ಕ್‌ಗೆ ₹485 ಬಿಲ್ ಹಾಕಲಾಯಿತು. ಎಲ್ಲದಕ್ಕೂ ಮನಬಂದಂತೆ ದರ ನಿಗದಿಪಡಿಸಿ, ಬಡವರನ್ನು ಶೋಷಿಸಿದ್ದಾರೆ’ ಎಂದು ಹರಿಹಾಯ್ದರು.

ಬೆಂಗಳೂರಿನಲ್ಲಿ 10 ಸಾವಿರ ಬೆಡ್‌ಗಳನ್ನು ಬಾಡಿಗೆಗೆ ಪಡೆದು, ಒಂದು ಬೆಡ್‌ಗೆ ದಿನಕ್ಕೆ ₹20 ಸಾವಿರ ಬಾಡಿಗೆ ದರ ನಿಗದಿ ಮಾಡಲಾಯಿತು. ಬಾಡಿಗೆ ಹಣ ಕೊಡುವ ಬದಲು ಅದೇ ದರದಲ್ಲಿ ಎರಡು ಬೆಡ್‌ ಖರೀದಿಸಬಹುದಿತ್ತು ಎಂದರು. ಕೋವಿಡ್ ತಗುಲಿದ್ದ ರೋಗಿಗಳಿಗೆ ₹8 ಲಕ್ಷದಿಂದ ₹10 ಲಕ್ಷದವರೆಗೆ ಬಿಲ್‌ ಮಾಡಲಾಯಿತು. ನಮ್ಮದೇ ಬಿಜೆಪಿ ಸರ್ಕಾರವಿದ್ದರೂ ಕಳ್ಳರು ಕಳ್ಳರೇ ತಾನೇ? ಇದನ್ನು ಯಡಿಯೂರಪ್ಪ ಅವರ ಬಗ್ಗೆ ವಿಧಾನಸೌಧದಲ್ಲಿಯೇ ಹೇಳಿದ್ದೇನೆ. ಈ ಕುರಿತಂತೆ ನನ್ನಲ್ಲಿ ಇನ್ನಷ್ಟು ವಿಷಯಗಳಿವೆ. ಎಲ್ಲವನ್ನೂ ಬಯಲು ಮಾಡುತ್ತೇನೆ’ ಎಂದರು.

ಕೋವಿಡ್‌ ತಗುಲಿದಾಗ ನನಗೇ ₹5 ಲಕ್ಷ ಬಿಲ್‌ ಮಾಡಲಾಯಿತು. ನಾನು ಅಷ್ಟು ಖರ್ಚು ಮಾಡಿದೆ. ಆದರೆ, ಸರ್ಕಾರದಿಂದ ಈವರೆಗೆ ಮರುಪಾವತಿ ಮಾಡಿಕೊಂಡಿಲ್ಲ. ಆದರೆ, ಇಷ್ಟು ಹಣ ಬಡವರಿಂದ ಪಾವತಿಸಲು ಆಗುವುದೇ ಎಂದು ಪ್ರಶ್ನಿಸಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!