ಬೆಂಗಳೂರು : ಸಿಎಂ ಸಿದ್ದರಾಮಯ್ಯ ರವರು ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರವು ಮಾಡಲಾಗಿದೆ. ಇಂದು ವಿಧಾನಸೌಧಕ್ಕೆ ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಆಗಮಿಸಿದ ವೇಳೆ ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿ ಆ ದ್ವಾರದಲ್ಲೇ ನಿಂತರು.
ಪಶ್ಚಿಮ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ಎಂದರು. ಆದರೆ ದಕ್ಷಿಣದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿಕ್ಕೆ ಪ್ರವೇಶಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ “ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು” ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು.