ಬೆಂಗಳೂರು: ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಿದ್ರೂ ಅಕೌಂಟ್ʼಗೆ ಇನ್ನೂ ದುಡ್ಡು ಬಂದಿಲ್ಲ ಎಂಬ ಮಾತು ಕೇಳಿಬಂದಿತ್ತು. ಇದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಸಾಕಷ್ಟು ತಾಂತ್ರಿಕ ಸಮಸ್ಯೆ ಎದುರಾಗಿದೆ. ಹೀಗಾಗಿ ಈ ಸಮಸ್ಯೆಯನ್ನು ಬಗೆಹರಿಸಬೇಕು. ಬಾಕಿ ಉಳಿದ ಫಲಾನುಭವಿಗಳಿಗೆ ಶೀಘ್ರದಲ್ಲೇ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಎರಡನೇ ಕಂತಿನ ಹಣವು ಹಂತ ಹಂತವಾಗಿ ಬಿಡುಗಡೆಯಾಗುತ್ತಿದೆ. ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ” ಸೂಚಿಸಿದ್ದಾರೆ.