ಬೆಂಗಳೂರು : ಬೆಂಗಳೂರಿನಲ್ಲಿ 40 ಅಡಿಯ ರಾಮನ ಕಟೌಟ್ ಧರೆಗುರುಳಿದ ಘಟನೆ ಬೆಂಗಳೂರಿನ ನಂದಿನಿ ಲೇ ಔಟ್ ಕೃಷ್ಣಾನಂದ ನಗರ ಸರ್ಕಲ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಮನ ಈ ಬೃಹತ್ ಕಟೌಟ್ ನಿಲ್ಲಿಸಲಾಗಿತ್ತು. ಆ ಬಳಿಕ ಬಿಬಿಎಂಪಿ ತೆರವು ಮಾಡಿರಲಿಲ್ಲ. ಅದೃಷ್ಟವಶಾತ್ ಕಟೌಟ್ ಬೀಳೋ ವೇಳೆ ಯಾವುದೇ ವಾಹನಗಳು ಸಂಚರಿಸಿಲ್ಲ. ಹೀಗಾಗಿ ಭಾರೀ ದುರಂತವೊಂದು ತಪ್ಪಿದೆ. ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಗಾಳಿಗೆ ಬಿದ್ದಿರೋ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂರು ದಿನದಿಂದ ನಿಲ್ಲಿಸಿದ್ದ ಕಟೌಟ್ ಏಕಾಏಕಿ ಗಾಳಿಗೆ ಬಿದ್ದಿರುವುದರಿಂದ ಸ್ಥಳೀಯರಲ್ಲಿ ಅನುಮಾನ ಉಂಟಾಗಿದೆ. ಬೇಕುಂತಲೇ ಕಟೌಟ್ ಕಡೆವಿದ್ದಾರಾ ಅನ್ನೋ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳದಲ್ಲಿದ್ದ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಜೊತೆಗೆ ಕಟೌಟ್ ಹಾಕಿದ್ದವರು ಯಾರು?, ಕಟೌಟ್ ಹಾಕಲು ಅನುಮತಿ ಪಡೆದಿದ್ದರಾ ಅಂತಾನೂ ಪರಿಶೀಲನೆ ನಡೆಸುತ್ತಿದ್ದಾರೆ.