ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ತಲಘಟ್ಟಪುರ ಮುಖ್ಯರಸ್ಯೆಯಲ್ಲಿ ನಡೆದಿದೆ.
ತಡರಾತ್ರಿ 1.20ಕ್ಕೆ ಮಹಾರಾಜ ಪ್ಯಾಲೆಸ್ ಹೋಟೆಲ್ ಕಡೆಯಿಂದ ರೀತು ಆಸ್ಪತ್ರೆ ಕಡೆ ಹೋಗುತ್ತಿದ್ದ ಕಾರು ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಹಿನ್ನೆಲೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಕಾರು ಚಾಲಕ ಕಿರಣ್ (28) ಮೃತ ದುರ್ದೈವಿ.
ಚಾಲಕ ಪ್ರಸನ್ನ ಅತಿ ವೇಗವಾಗಿ ಇನೋವಾ ಕಾರನ್ನು ಚಲಾಯಿಸಿಕೊಂಡು ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಈ ಸಂಬಂಧ ತಲಘಟ್ಟಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.