ಮೈಸೂರು : ಅಂಬೇಡ್ಕರ್ ನಾಮಫಲಕ ವಿಚಾರವಾಗಿ 2 ಕೋಮುಗಳ ನಡುವೆ ಗಲಾಟೆ ನಡೆದಿದ್ದು, ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.
ನಾಮಫಲಕ ವಿಚಾರವಾಗಿ ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘರ್ಷಣೆಯ ಪರಿಣಾಮ ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂಗೊಂಡಿವೆ.
ಇನ್ನು ಕಲ್ಲು ತೂರಾಟದಲ್ಲಿ ಪೊಲೀಸರಿಗೂ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದಾರೆ.