ಬೆಂಗಳೂರು: ನಗರದಲ್ಲಿ ಪದೇ ಪದೇ ಚಿರತೆ ಪ್ರತ್ಯಕ್ಷವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದ್ದಾರೆ.
ಈ ಬಾರಿ ಮಳೆಯ ಕೊರತೆತಿಂದಾಗಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಿದ್ದಾರೆ.