ಬೀದರ್ : ಸರ್ಕಾರ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಾಪಸ್ ಪಡೆದ ವಿಚಾರವಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದಾರೆ.
ಡಿ.ಕೆ ಶಿವಕುಮಾರ್ ಗೆ ತನಿಖೆ ನಡೆದರೆ ಮತ್ತೆ ಜೈಲಿಗೆ ಹೋಗುತ್ತಾರೆ ಎಂದು ಅವರಿಗೆ ಖಾತ್ರಿ ಇದೆ. ಅವರು ಈಗಾಗಲೇ ಲೂಟಿ ಹೊಡೆದು ಆಸ್ತಿ ಹೆಚ್ಚು ಗಳಿಸಿಕೊಂಡಿದ್ದಾರೆ. ಹಿಂದಿನ ಸರ್ಕಾರ ತೆಗೆದುಕೊಂಡ ನಿರ್ಣಯ ಅವರ ವಿರುದ್ದ ಇದೆ ಎಂಬ ಕಾರಣಕ್ಕೆ ಹಿಂದಕ್ಕೆ ಪಡೆದುಕೊಳ್ಳುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ರಾಜ್ಯದ ಜನತೆಗೆ ಸರ್ಕಾರ ಉತ್ತರಿಸಬೇಕಾಗುತ್ತದೆ ಎಂದರು.
ಯಾದಗಿರಿಯಲ್ಲಿ ಸಿಕ್ಕಿಬಿದ್ದಿರುವ ಪಡಿತರ ಅಕ್ಕಿ ಒಂದು ಉದಾಹರಣೆ ಮಾತ್ರವಾಗಿದ್ದು, ಪ್ರತಿ ಜಿಲ್ಲೆಯಲ್ಲಿ ಪ್ರತಿ ಇಲಾಖೆಯಲ್ಲಿ ಇಂತಹ ವ್ಯವಹಾರಗಳೆ ನಡೆಯುತ್ತಿವೆ. ಜನಸಾಮಾನ್ಯರಿಗೆ ಸಿಗಬೇಕಾದ ಸವಲತ್ತುಗಳನ್ನು ಲೂಟಿ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.