State News

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಮಾನಕರ ಹೇಳಿಕೆ ಆರೋಪ: ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ ದೊರೆತಿದೆ. ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ಗೆ ಮಂಗಳವಾರ ಹೈಕೋರ್ಟ್​ ತಡೆ ನೀಡಿದೆ. ಹೈಕೋರ್ಟ್​​ನ ಕಲಬುರಗಿ ವಿಭಾಗೀಯ ಪೀಠವು ಎಫ್​ಐಆರ್​ಗೆ ತಡೆಯಾಜ್ಞೆ ನೀಡಿದೆ.

ಅಯೋಗ್ಯ’ ಎನ್ನುವ ಹೇಳಿಕೆ ಯಾವ ಜಾತಿಗೂ ಅನ್ವಯವಾಗುದಿಲ್ಲ. ಅಷ್ಟೇ ಅಲ್ಲದೆ, ಯಾರ ಜಾತಿ ನಿಂದನೆ ಆಗಿದೆಯೋ ಅವರು ದೂರು ನೀಡಿಲ್ಲ. ರಾಜಕೀಯ ಪಕ್ಷದ ಜಿಲ್ಲಾಧ್ಯಕ್ಷರು ದೂರು ನೀಡಿದ್ದಾರೆ. ನೀವು ಯಾವ ಉದ್ದೇಶ ಇಟ್ಟುಕೊಂಡು ದೂರು ನೀಡಿದ್ದಿರಿ ಅನ್ನೋದು ಗೋತ್ತಾಗುತ್ತದೆ ಎಂದು ನ್ಯಾಪೀಠ ದೂರುದಾರರನ್ನೇ ತರಾಟೆಗೆ ತೆಗೆದುಕೊಂಡಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!