State News

ಹೊಸ ವಂಟಮುರಿ ಘಟನೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ.!

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣ ಗೊತ್ತಾದ ತಕ್ಷಣವೇ ಗೃಹ ಸಚಿವರು ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಎಲ್ಲಿ ಸರ್ಕಾರ ಫೇಲ್ ಆಗಿದೆ ಎಂದು ಪ್ರಶ್ನಿಸಿದರು.

ಉತ್ತರ ಪ್ರದೇಶದಲ್ಲಿ ಶಾಸಕ 9 ವರ್ಷದ ಹುಡುಗಿ ಮೇಲೆ ರೇಪ್ ಮಾಡಿ ಜೈಲು ಸೇರಿದ್ದಾನೆ. ಇದಕ್ಕೆ ಜೆಪಿ ನಡ್ಡಾ ಮತ್ತು ಬಿಜೆಪಿ ನಾಯಕರು ಏನು ಹೇಳತ್ತಾರೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಇಂತಹ ಎಂಎಲ್ಎ ಇಟ್ಟುಕೊಂಡು ಹೆಣ್ಣುಮಕ್ಕಳು ಮೇಲೆ ದೌರ್ಜನ್ಯ ಮಾಡುವ ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡಲು ಏನು ನೈತಿಕತೆಯಿದೆ ಎಂದು ವಾಗ್ದಾಳಿ ನಡೆಸಿದರು.

ಯಾರ ಕಾಲದಲ್ಲಿ ಎಷ್ಟು ಪ್ರಕರಣ ಆಗಿವೆ ಅಂತ ನ್ಯಾಷನಲ್ ಕ್ರೈಂ ಬ್ಯಿರೋ ಅವರ ವರದಿ ನೋಡಲಿ. ಯಾರ ಮೇಲೆ ದೌರ್ಜನ್ಯ ಆದರೂ ಅವರ ಮೇಲೆ ನಾವು ಕಠಿಣ ಕ್ರಮ ತೆಗೆದುಕೊಳ್ಳತ್ತವೆ. ಬೆಳಗಾವಿಯಲ್ಲಿ ನಡೆದಿದ್ದು ಅನಾಗರಿಕ ಘಟನೆ. ಇದು ನಾಗರಿಕ ಸಮಾಜದಲ್ಲಿ ನಡೆಯಬಾರದು ಎಂದರು.

ತಜ್ಞರ ಜೊತೆ ಸಭೆ ಮಾಡಲು ಸೂಚನೆ

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ನಿನ್ನೆ ಆರೋಗ್ಯ ಇಲಾಖೆ ಸಚಿವರ ಜೊತೆ ನಾನು ಮಾತಾಡಿದ್ದೇ‌ನೆ. ತಜ್ಞರ ಜೊತೆ ಸಭೆ ಮಾಡಲು ಸೂಚಿಸಿದ್ದೇನೆ ಎಂದರು.
ಕೋಲಾರದ ಮಾಲೂರಿನಲ್ಲಿ ವಸತಿ ಶಾಲೆಯ ವಿದ್ಯಾರ್ತಿಗಳಿಂದ ಶೌಚಾಲಯದ ಗುಂಡಿ ಕ್ಲೀನ್ ಮಾಡಿಸಿದ ಪ್ರಕರಣ ಸಂಬಂಧ ಮಾತನಾಡಿದ ಸಿದ್ದರಾಮಯ್ಯ, ಆ ವಿಚಾರ ನನ್ನ ಗಮನಕ್ಕೆ ಬಂದಿದೆ. ವರದಿ ತರಿಸಿಕೊಳ್ಳುತ್ತೇನೆ. ಯಾರೆ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!