ಶಹಾಪುರ : ಶಹಾಪುರ ಪಟ್ಟಣದ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಇಂದು ವಿಜ್ಞಾನ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರೇಣುಕಾ ಪಾಟೀಲ್, ವಿದ್ಯಾರ್ಥಿ ದೆಸೆಯಲ್ಲಿ ವೈಜ್ಞಾನಿಕ ಚಿಂತನೆ ಅಳವಡಿಕೆ ಮುಖ್ಯ ಚಿಂತನೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಹಾಗೂ ಹೊಸ ಶಿಕ್ಷಣ ನೀತಿಯ ಮೂಲ ಉದ್ದೇಶವಾಗಿದೆ.
ಮಕ್ಕಳಲ್ಲಿ ಸೃಜನಾತ್ಮಕತೆ ಹಾಗೂ ನಾವಿನ್ಯತೆ ಬೆಳವಣಿಗೆ ಪೂರಕವಾಗಿದೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ರೇಣುಕಾ ಪಾಟೀಲ್ ಹೇಳಿದರು. ನಗರದ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ವಿಜ್ಞಾನ ಮತ್ತು ವಸ್ತು ಪ್ರದರ್ಶನದಲ್ಲಿ ಅವರು, ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಕೌತುಕ ಹೆಚ್ಚಿಸಲು, ವಿಜ್ಞಾನ ಪ್ರದರ್ಶನ ಅವಶ್ಯಕವಾಗಿದೆ, ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಗುರುತಿಸುವುದು ಬಹು ಮುಖ್ಯವಾಗಿದೆ ಎಂದರು.