ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ ಕೊಟ್ಟ ಭರವಸೆಗಳನ್ನು ಉಳಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಡುವ ಐದು ಇಲಾಖೆಯ ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದರು. ಪ್ರಮುಖವಾಗಿ ಐದು ಗ್ಯಾರಂಟಿಗಳ ಜೂನ್ 1 ರಂದು ಕ್ಯಾಬಿನೆಟ್ ಸಭೆ ನಡೆಸಿ ಜಾರಿಗೆ ತರಲು ಕಸರತ್ತು ನಡೆಸಿದ್ದಾರೆ.
ಇಂದು ಕೂಡಾ ಸಭೆ ಆರಂಭಿಸಿದ್ದಾರೆ. ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪ್ರಸಾದ್ ಸಭೆಯಲ್ಲಿ ಭಾಗಿ ಆಗಿದ್ದು ಐದು ಗ್ಯಾರಂಟಿಗಳ ಆರ್ಥಿಕ ಸ್ಥಿತಿ ಗತಿ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ನಗರದ ಶಕ್ತಿ ಭವನದಲ್ಲಿ ಸಭೆ ಮುಂದುವರೆದಿದೆ ಸಿಎಂ ಸಿದ್ದರಾಮಯ್ಯ ನೇರವಾಗಿ ಆರ್ಥಿಕ ಇಲಾಖೆಯ ಅಧಿಕಾರಗಳಿಂದ ಮಾಹಿತಿ ಪಡೆದು ಕೊಳ್ಳುತ್ತಿದ್ದಾರೆ.