ಬೆಂಗಳೂರು : ಚಿತ್ರಕಲಾ ಪರಿಷತ್ ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು 21ನೇ ಚಿತ್ರಸಂತೆ ಆಯೋಜಿಸಿದೆ.
ಈ ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಇನ್ನು ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಸಿ.ಸುಧಾಕರ್, ಶಾಸಕರಾದ ಅಜಯ್ ಸಿಂಗ್, ರಿಜ್ವಾನ್ ಅರ್ಷದ್ ಸೇರಿ ಹಲವರು ಭಾಗಿಯಾಗಿದ್ದರು.