ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪಲ್ಲಕ್ಕಿ ಬಸ್ ಗಳಿಗೆ ಚಾಲನೆ ನೀಡಿದ್ರು.
ಸುಮಾರು 148 ಬಸ್ಗಳಿಗೆ ಚಾಲನೆ ನೀಡಲಾಗಿದ್ದು, 44 ಎಸಿ ಸ್ಲೀಪರ್ ಮತ್ತು ನಾಲ್ಕು ನಾನ್ ಎಸಿ ಸ್ಪೀಪರ್ ಬಸ್ಗಳನ್ನು ಹೊಂದಿದೆ. ಆದರೆ, ಸ್ಲೀಪರ್ ಬಸ್ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇನ್ನು 100 ನಗರ ಸಾರಿಗೆ ಬಸ್ಸುಗಳು ಹಾಗೂ 40 ನಾನ್ ಎಸಿ ಸ್ಲೀಪರ್ ಬಸ್ ಗಳು ಅಶೋಕ ಲೇಲ್ಯಾಂಡ್ ಕಂಪನಿಗೆ ಸೇರಿದ್ದಾಗಿದೆ. ನಾಲ್ಕು ನಾನ್ ಎಸಿ ಸ್ಲೀಪರ್, ನಾಲ್ಕು ಎಸಿ ಸ್ಲೀಪರ್ ಬಸ್ಗಳು ಟಾಟಾ ಕಂಪನಿಯದ್ದಾಗಿವೆ. ಈ ಪೈಕಿ 44 ಎಸಿ ಸ್ಲೀಪರ್, ನಾಲ್ಕು ನಾನ್ ಎಸಿ ಸ್ಲೀಪರ್ ಬಸ್ಗಳನ್ನು ಹೊರತುಪಡಿಸಿ ಉಳಿದ 100 ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.