ಬೆಂಗಳೂರು: ಇಂದು ಹಾಸನಾಂಬೆ ದರ್ಶನ ಪಡೆಯೋದಕ್ಕಾಗಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಇಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹಾಸನಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಸಿದ್ದರಾಮಯ್ಯ ಮಧ್ಯಾಹ್ನ 12.30ಕ್ಕೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ.
ಹಾಸನಾಂಬೆ ದೇವಿ ದರ್ಶನ ಪಡೆಯಲು 4ನೇ ದಿನವೂ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಮುಂಜಾನೆ 5 ಗಂಟೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದುನಿನ್ನೆ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಿಗೆ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ 15ರಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚಲಿದೆ.
ನಿನ್ನೆ ಮುಸ್ಲಿಂ ಕುಟುಂಬವೊಂದು ಹಾಸನಾಂಬೆ ದರ್ಶನಕ್ಕೆ ಬಂದಿದೆ. ಸರತಿ ಸಾಲಿನಲ್ಲಿ ನಿಂತು ಹಜೀರ ಎಂಬ ಮಹಿಳೆ ಕುಟುಂಬ ತಾಯಿಯ ದರ್ಶನ ಪಡೆದಿದ್ದಾರೆ. ದೇವನೊಬ್ಬ ನಾಮ ಹಲವು ಎಂಬ ಸಂದೇಶ ಸಾರಿದ್ದಾರೆ. ಹಾಸನಾಂಬೆ ಮೇಲೆ ನಮಗೆ ನಂಬಿಕೆ ಇದೆ. ತುಂಬ ವರ್ಷಗಳಿಂದ ದೇವರ ದರ್ಶನಕ್ಕೆ ಬರಬೇಕು ಎಂದುಕೊಂಡಿದ್ದು ಈ ಬಾರಿ ದರ್ಶನಕ್ಕೆ ಬರುವ ಅವಕಾಶ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.