ಹಾಸನ: ಇಂದು ಸಿಎಂ ಸಿದ್ದರಾಮಯ್ಯ ಅವರು ಹಾಸನದಲ್ಲಿ ನಡೆಯತ್ತಿರುವ ಹಾಸನಾಂಬೆ ದರ್ಶನ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಕೆಎನ್ ರಾಜಣ್ಣ, ಶಾಸಕ ಶಿವಲಿಂಗೇಗೌಡ ಸಾಥ್ ನೀಡಿದರು.
ನಂತರ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಈ ಬಾರಿ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಇಂದು ಎರಡನೇ ಬಾರಿಗೆ ಹಾಸನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ನಾಡಪ್ರಭು ಕೆಂಪೇಗೌಡರ ಜಯಂತಿಯ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಹಾಸನಕ್ಕೆ ಆಗಮಿಸಿದ್ದರು.