State News

ಬೆಂಗಳೂರು ಸೇರಿ ರಾಜ್ಯಾದ್ಯಂತ ಚಳಿಯ ವಾತಾವರಣ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ, ಬೆಳಗ್ಗಿನ ಹೊತ್ತಾಲ್ಲಿ ಮಂಜು ಮುಸುಕಿದ ವಾತಾವರಣವಿದೆ. ಕೆಲವು ಕಡೆಗಳಲ್ಲಿ ಸಂಜೆಯಾಗುತ್ತಿದ್ದಂತೆ ಚಳಿ ಆಗಲಿದ್ದು, ತಡರಾತ್ರಿಯಾಗುತ್ತಿದ್ದಂತೆ ಚಳಿಯ ತೀವ್ರತೆ ಹೆಚ್ಚಾಗುತ್ತಿದೆ.

ಬಹುತೇಕ ಕಡೆಗಳಲ್ಲಿ ಚಳಿಯ ವಾತಾವರಣದ ಉಷ್ಣಾಂಶವು 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ನಿರೀಕ್ಷಿಸಬಹುದು.

ಕರಾವಳಿ ಕರ್ನಾಟಕದ ಭಾಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ದಿನಗಳಲ್ಲಿ ಕೆಲವು ಕಡೆ ಸಾಧಾರಣದಿಂದ ಭಾರಿ ಮಳೆಯಾಗಿತ್ತು. ಈ ವಾತಾವರಣದ ನಡುವೆ, ಉಷ್ಣಾಂಶವು ಹೆಚ್ಚಾಗಿತ್ತು. ಈ ಅನುಭವ ಇನ್ನೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!