ಬೆಂಗಳೂರು : ಜಾರ್ಖಂಡ್ ಕಾಂಗ್ರೆಸ್ ಸಂಸದ ಧೀರಜ್ ಸಾಹು ಬಳಿ ಪತ್ತೆಯಾಗಿರುವ ಕೋಟಿ ಕೋಟಿ ಹಣ ಕಾಂಗ್ರೆಸ್ ಭ್ರಷ್ಟಾಚಾರದ ಕರಾಳ ಮುಖ ದರ್ಶನ ಮಾಡಿಸಿದೆ.
ಸುದೀರ್ಘ ಕಾಲ ಕಾಂಗ್ರೆಸ್ ಲೂಟಿ ಹೊಡೆದಿರುವ ಈ ದೇಶದ ಸಂಪತ್ತು ಎಲ್ಲೆಲ್ಲಿವೆ ಎಂಬುದನ್ನು ಐಟಿ ಇಲಾಖೆ ಪತ್ತೆ ಹಚ್ಚುವ ಮುನ್ನ ನೀವೇ ಹೊರತಂದು ಸಕ್ರಮ ಮಾರ್ಗದಲ್ಲಿ ಜನರಿಗೆ ಹಂಚಿಬಿಡಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ.
ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮೂಲದ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ (BDPL) ಕಚೇರಿಗಳ ಮೇಲೆ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಈವರೆಗೆ 290 ಕೋಟಿರೂ. ಪತ್ತೆಯಾಗಿದೆ. ಈ ಪ್ರಕರಣಕ್ಕೆ ಪ್ರತಿಕ್ರಿಯಿಸಿರುವ ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿ ಭಾಷಣ ಪ್ರಸ್ತಾಪಿಸಿ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಟಾಂಗ್ ಕೊಟ್ಡಿದ್ದಾರೆ.