ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಸವನಗದ್ದೆಯ ಪ್ರಸನ್ನ ಎಂಬಾತ ಮನೆಯಲ್ಲಿ 18 ಜಿಂಕೆ ಕೊಂಬು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆರಗ ಜ್ಞಾನೇಂದ್ರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಕಾಡು ಕೋಣದ ಕೊಂಬು, ಶ್ರೀಗಂಧ ಸಂಗ್ರಹಣೆ ಮಾಡಿದವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೆ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ದರ್ಪ ತೋರಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಡಿಎಫ್ಓಗೆ ದೂರು ಸಲ್ಲಿಸಿದರು.