ಬೆಂಗಳೂರು: ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತಿದೆ. ಇದೀಗ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ
ಆರೋಪಿಗಳಿಂದ 10 ಲಕ್ಷದಷ್ಟು ಹಣ ವಶಕ್ಕೆ ಪಡೆದಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಗರದಲ್ಲಿ ಲ್ಯಾಪ್ಟಾಪ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 75 ಲಕ್ಷ ಮೌಲ್ಯದ ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆದಿದ್ದೇವೆ ಎಂದು ತಿಳಿಸಿದರು.
ಆರೋಪಿಗಳು ಮೂಲತಃ ಹೈದ್ರಾಮಾದ್ನವರು. ಆರೋಪಿ ಪ್ರತಿಷ್ಠಿತ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದನು. ಈ ಹಿಂದೆ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದರಿಂದ ಕಂಪನಿಯಿಂದ ಹೊರ ಹಾಕಿದ್ದರು. ಅದಾದ ಬಳಿಕ ಸಹ ಕಳ್ಳತನ ಕೃತ್ಯ ಮುಂದುವರೆಸಿದ್ದ. ಈತ ತಂದ ವಸ್ತುಗಳನ್ನು ಪಡೆದು ಮಾರಾಟ ಮಾಡುತಿದ್ದ ಆರೋಪಗಳನ್ನು ಸಹ ಬಂಧಿಸಲಾಗಿದೆ ಎಂದರು.