ಬೆಂಗಳೂರು : ಇಂದು ಭಾನುವಾರ ಹಿನ್ನೆಲೆ ಕೊಂಚ ರಿಲ್ಯಾಕ್ಸ್ ಮೂಡ್ ನಲ್ಲಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಬೆಳ್ಳಂ ಬೆಳಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಕ್ ಕೊಟ್ಟಿದ್ದಾರೆ. ಪ್ರತಿ ಕಾಮಗಾರಿಯ 15 ಅಂಶಗಳನ್ನು ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿಕೊಡುವಂತೆ ಡಿಕೆಶಿ ಸೂಚನೆ ನೀಡಿದ್ದಾರೆ.
2019-20 ಹಾಗೂ 2022-23ರ ಸಾಲಿನಲ್ಲಿ ಕಾಮಗಾರಿ ಬಗ್ಗೆ ಡಿಕೆ ಪಿನ್ ಟು ಪಿನ್ ಡೀಟೇಲ್ಸ್ ಕೇಳಿದ್ದಾರೆ. 2019-23 ಅವಧಿಯಲ್ಲಿ ಅನುಮೋದಿತ, ಅನುಷ್ಠಾನಗೊಳಿಸಿರುವ, ಟೆಂಡರ್ ಹೀಗೆ ಪ್ರತಿಯೊಂದರ ಮಾಹಿತಿ ನೀಡುವಂತೆ ಹೇಳಿದ್ದಾರೆ. ಮಹಾನಗರ ಪಾಲಿಕೆ ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಡಿಸಿಎಂ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ.
ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಪಿನ್ ಟು ಪಿನ್ ಮಾಹಿತಿ ಕಲೆ ಹಾಕಲು ಮುಂದಾಗಿದ್ದು, 2019 ರಿಂದ 2023ರ ಅವಧಿಯಲ್ಲಿ ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ, ಬಿಜೆಪಿ ಅವಧಿಯಲ್ಲಿ ಪಾಲಿಕೆ ಆಯುಕ್ತರಾಗಿದ್ದ ಗೌರವ್ ಗುಪ್ತಾ, ಹಣಕಾಸು ಕಮಿಷನರ್ ಆಗಿದ್ದ ತುಳಸಿ ಮದ್ದಿನೇನಿ ಇವರ ಅವಧಿಯಲ್ಲಿ ಕೈಗೊಂಡಿರುವ ಕಾಮಾಗಾರಿಗಳ ವರದಿ ಕೇಳಿದ್ದಾರೆ. ಸಂಪೂರ್ಣ ಕಾಮಗಾರಿ ಮಾಹಿತಿ ಹಾಗೂ ಅಧಿಕಾರಿಗಳ ವಿವರ ಕೇಳಿ ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಶಾಕ್ ಕೊಟ್ಟಿದ್ದಾರೆ.
ವರದಿ – ಹರ್ಷಿತಾ ಪಾಟೀಲ