ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಹಿನ್ನೆಲೆ ಇಂದು ಬೆಳಿಗ್ಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕುಟುಂಬ ಸಮೇತ ದೆಹಲಿಗೆ ತೆರಳಲಿದ್ದಾರೆ.
ದೆಹಲಿ ಬಿಜೆಪಿ ನಾಯಕರ ಜೊತೆ ಮಾತುಕತೆಗೆ ಇನ್ನೂ ಸಮಯ ನಿಗದಿ ಆಗಿಲ್ಲ. ಅವಕಾಶ ಸಿಕ್ಕರೆ ಅಮಿತ್ ಶಾ ಅವರನ್ನು ಕುಮಾರಸ್ವಾಮಿ ಭೇಟಿ ಮಾಡಲಿದ್ದಾರೆ. ನಂತರ ದೆಹಲಿಯಿಂದ ಉತ್ತರ ಪ್ರದೇಶಕ್ಕೆ ಹೆಚ್‌ಡಿಕೆ ಫ್ಯಾಮಿಲಿ ಜೊತೆ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಸಹಾ ಅಯೋಧ್ಯೆಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.