ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಾಳೆಯಿಂದ ಶಾಸಕರ ಜೊತೆ ಜಿಲ್ಲಾವಾರು ಸಭೆ ನಡೆಸಲಿದ್ದಾರೆ.
ಇತ್ತೀಚೆಗೆ ನಡೆದಿದ್ದ ಸಿಎಲ್ಪಿ ಸಭೆಯಲ್ಲಿ ಸಚಿವರ ವಿರುದ್ಧ ಅಸಮಾಧಾನ ಭುಗಿಲೆದ್ದಿತ್ತು. ಸಚಿವರು ಗೌರವ ಕೊಡ್ತಿಲ್ಲವೆಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗಾಗಿ ತಾವೇ ಖುದ್ದು ಅಹವಾಲು ಕೇಳುವುದಾಗಿ ಸಿಎಂ ಭರವಸೆ ನೀಡಿದ್ದರು.
ಈ ಕಾರಣಕ್ಕಾಗಿ ನಾಳೆ ಬೆಳಗ್ಗೆ 11 ಗಂಟೆಯಿಂದ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ 3 ದಿನಗಳ ಕಾಲ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮುಂದಾಗಿದ್ದಾರೆ. ಕಾಂಗ್ರೆಸ್ ಶಾಸಕರ ದೂರು, ಅಹವಾಲು ಆಲಿಸಲಿದ್ದಾರೆ. ಮೊದಲ ದಿನ 6 ಜಿಲ್ಲೆಗಳ 31 ಶಾಸಕರು ಹಾಗೂ ಸಚಿವರ ಜೊತೆ ಸಭೆ ನಡೆಸಲಿದ್ದಾರೆ.