ಬೆಂಗಳೂರು: ಮೊದಲ ಬಾರಿ ಶಾಸಕರಾದವರು ಮತ್ತು ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಪಡೆದವರಿಗೆ ನಿಗಮ ಮಂಡಳಿ ಸ್ಥಾನ ಕೊಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಎಂ, ಸುರ್ಜೇವಾಲ ಹಾಗೂ ನಾನು ಎಲ್ಲರೂ ಚರ್ಚೆ ಮಾಡಿ ಪಟ್ಟಿ ಅಂತಿಮ ಮಾಡಿದ್ದೇವೆ ಎಂದರು.
ಇನ್ನು ಕೋರ್ಟ್ ನಲ್ಲಿ ಏನಾಯ್ತು ಅಂತ ನನಗೆ ಗೊತ್ತಿಲ್ಲ. ನನ್ನ ವಕೀಲರು ತಿಳಿಸಿದ ಬಳಿಕ ಮಾತನಾಡಬೇಕು. ಯತ್ನಾಳ್ ಸೇರಿದಂತೆ ಯಾರು ಯಾರು ಅಭಿಪ್ರಾಯ ಏನು ಯಾರು ಯಾರು ಏನು ಮಾತನಾಡಿದ್ದಾರೆ ಎಲ್ಲ ನಮ್ರತೆಯಿಂದ ನೋಡ್ತಿದ್ದೇನೆ.
ಸೂಕ್ತ ಸಮಯದಲ್ಲಿ ಅದಕ್ಕೆಲ್ಲ ಉತ್ತರ ಕೊಡ್ತೇನೆ. ನಾನೇನು ತಪ್ಪು ಮಾಡಿಲ್ಲ.ನಾನು ಮಾಡಿದ್ದೆಲ್ಲ ಪಾರ್ಟಿ ಸಲುವಾಗಿ ಮಾಡಿದ ಕೆಲಸ.ಪಕ್ಷಕ್ಕೋಸ್ಕರ ನಾನು ಕೆಲಸ ಮಾಡಿದ್ದು, ಸಾಕಷ್ಟು ಅನುಭವಿಸಿದ್ದೇನೆ. ಮುಂದೆಯೂ ಕೂಡ ತೊಂದರೆ ಕೊಡ್ತೀನಿ ಅಂದ್ರೆ ಅದನ್ನು ನೋಡಲು ಭಗವಂತ ಇದ್ದಾನೆ ಎಂದು ಹೇಳಿದ್ದಾರೆ.