ಬೆಂಗಳೂರು: ಹಳೇ ಹುಬ್ಬಳ್ಳಿ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಹಿಂಪಡೆಯುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಇದೀಗ ಡಿಕೆಶಿ ಶಿಫಾರಸು ಆಧಾರಿಸಿ ಹಳೇ ಹುಬ್ಬಳ್ಳಿ ಪ್ರಕರಣ ಸೇರಿ ವಿವಿಧ ಪ್ರಕರಣ ಹಿಂಪಡೆಯುವ ಬಗ್ಗೆ ದಾಖಲೆ ಸಮೇತ ಎಡಿಜಿಪಿ ಮಾಹಿತಿ ಕೇಳಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣವನ್ನು ಕೈಬಿಡುವಂತೆ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಬಂದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನ ಏರ್ ಪೋರ್ಟ್ ನಲ್ಲಿ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹ ಇಲಾಖೆಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ವಕೀಲರು ಹಾಗೂ ಹೋರಾಟಗಾರರು ಒಂದು ಪತ್ರ ಬರೆದಿದ್ದಾರೆ. ಅದರ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಆ ಪತ್ರವನ್ನ ನಾನು ಇವತ್ತೇ ನೋಡಿದ್ದು. ಯಾವುದೇ ಕೇಸ್ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದರು.
ಘಟನೆ ಹಿನ್ನೆಲೆ?
2022ರ ಏಪ್ರಿಲ್ 16ರಂದು ಹುಬ್ಬಳ್ಳಿಯಲ್ಲಿರಯ ಮಸೀದಿ ಮೇಲೆ ಯವಕನೊಬ್ಬ ಭಗವಾಧ್ವಜ ಹಾರಿಸಿ ನಂತರ ಆ ಚಿತ್ರವನ್ನು ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿಕೊಂಡಿದ್ದನು. ಈ ವಿಚಾರವಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ನಂತರ ಅಂದು ರಾತ್ರಿಯೇ ಹಳೇ ಹುಬ್ಬಳ್ಳಿ ಠಾಣೆ ಎದುರು ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಆಗಮಿಸಿ ಕಿರುಚಾಡಿದ್ದರು. ಅಷ್ಟೇ ಅಲ್ಲದೆ ಪೊಲೀಸ್ ಠಾಣೆಯಲ್ಲಿ ಕಲ್ಲಿನ್ನು ಎಸೆದಿದ್ದಾರೆ. ಆಸ್ಪತ್ರೆ, ದೇವಸ್ಥಾನ, ಮನೆಗಳ ಮೇಲೂ ಕಲ್ಲು ಎಸೆದು ಗಲಭೆ ಉಂಟುಮಾಡಿದ್ದರು. ಈ ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸೇರಿ ಎಂಟು ಪೊಲೀಸರಿಗೆ ಗಾಯವಾಗಿತ್ತು. ಹತ್ತಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂಗೊಂಡಿದ್ದವು.