ಬೆಂಗಳೂರು: ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಸಹ ಹೈಕೋರ್ಟ್ ತೆರವುಗೊಳಿಸಿದ್ದು, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಮತ್ತೆ ಸಂಕಷ್ಟ ಎದುರಾಗಿದೆ.
ಘಟನೆ ಹಿನ್ನೆಲೆ?
ಡಿ.ಕೆ ಶಿವಕುಮಾರ್ ಅವರು ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಹೀಗಾಗಿ ಡಿ.ಕೆ ಶಿವಕುಮಾರ್ ಈ ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿದ್ದು, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು.