ಚಿಕ್ಕಬಳ್ಳಾಪುರ : ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗೆ ಯತ್ನಿಸಿ ದೌರ್ಜನ್ಯ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರು ಕ್ಷೇತ್ರದಲ್ಲಿ ಗುಂಡಾಗಿರಿ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ಹಾಲಿ ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಮಾಜಿ ಶಾಸಕ ಡಾ ಕೆ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.
ಧೈರ್ಯ ಇದ್ರೆ ಪ್ರದೀಪ್ ಈಶ್ವರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಗೆಲ್ಲಲಿ ಎಂದು ಶಾಸಕ ಪ್ರದೀಪ್ ಈಶ್ವರ್ಗೆ ಮಾಜಿ ಸಚಿವ ಡಾ.ಸುಧಾಕರ್ ನೇರವಾಗಿ ಸವಾಲು ಹಾಕಿದ್ದಾರೆ. ನಾನು ಕೂಡ ಬಿಜೆಪಿಯಿಂದ ಹೊರಬಂದು ಸ್ವತಂತ್ರವಾಗಿ ಸ್ಪರ್ಧೆಸುತ್ತೇನೆ. ನಿನಗೆ ಎಷ್ಟು ವೋಟ್ ಬರುತ್ತೆ? ನನಗೆ ಎಷ್ಟು ವೋಟ್ ಬರುತ್ತೆ ನೋಡೋಣ. ಇಬ್ಬರಲ್ಲಿ ಯಾರು ಗೆಲ್ಲುತ್ತಾರೋ ನೋಡೋಣ ಎಂದಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರದಲ್ಲಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ರೌಡಿ ರಾಜಕಾರಣ ಬೆಳೆಸುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಚಿಕ್ಕಬಳ್ಳಾಪುರ ಕ್ಷೇತ್ರ ಶಾಂತಿಯುತವಾಗಿತ್ತು. ಕ್ಷೇತ್ರದ ಬಿಜೆಪಿ ಮುಖಂಡರ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅಶಾಂತಿ, ಅತ್ಯಾಚಾರ, ಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ದೇಶದಲ್ಲಿ ಯಾವತ್ತೂ ಕೂಡ ಜೈನಮುನಿ ಹತ್ಯೆ ಆಗಿರಲಿಲ್ಲ. ಆದರೆ ಹೀಗಾ ಜೈನ ಮುನಿ ಹತ್ಯೆಗೆ ರಾಜ್ಯದಲ್ಲಿ ಖ್ಯಾತಿಯಾಗಿದೆ. ರಾಜ್ಯದಲ್ಲಿ ಐಟಿ ಕಂಪನಿಯ ಮುಖ್ಯಸ್ಥರ ಕೊಲೆಯಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಡಾ.ಸುಧಾಕರ್ ಆಕ್ರೋಶ ಹೊರ ಹಾಕಿದರು.