ಮೈಸೂರು : ಪೊಲೀಸ್ ಪೇದೆ ಮೆಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಂದಿ ಮೇಲೆ ಎಫ್ಐಆರ್ ದಾಖಲಾಗಿದೆ.
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೊಲೀಸ್ ಪೇದೆ. ಪ್ರತಿಭಟನೆ ಶಾಂತಿಯುತವಾಗಿ ಮಾಡಿ ಎಂದು ಹೇಳಿದ್ದರು. ಆದ್ರೆ ಇದನ್ನ ಪ್ರಶ್ನಿಸಿದ್ದಕ್ಕೆ ಗ್ರಾಮಸ್ಥರು ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ್ದಾರೆ. ನ.17 ರಂದು ಜೆ.ಪಿ ಹುಂಡಿ ಗ್ರಾಮದ ಬಳಿ ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸುರೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಹುಲ್ಲಹಳ್ಳಿ ಪೊಲೀಸ್ ಠಾಣೆಯ ಮುಂದೆ ಶವ ಇಟ್ಟು ಕಾರಿನ ಚಾಲಕನನ್ನು ಬಂಧಿಸಿ ಪರಿಹಾರ ನೀಡುವಂತೆ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ನಂಜನಗೂಡು ಮತ್ತು ಹುಲ್ಲಹಳ್ಳಿಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ಎಂದು ಶಾಂತಿಯುತವಾಗಿ ಪ್ರತಿಭಟನೆ ಮಾಡಿ ಎಂದು ಪೊಲೀಸ್ ಪೇದೆ ಕಿರಣ್ ಹೇಳಿದ್ದರು. ಇದರಿಂದ ಪೊಲೀಸ್ ಪೇದೆ ಮೇಲೆ 16 ಮಂದಿ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನನ್ವಯ 16 ಮಂದಿ ಮೇಲೆ ಎಫ್ಐಆರ್ ದಾಖಲಾಗಿದೆ.