ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸವಾಲ್ ಹಾಕಿದ್ದಾರೆ…ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿ ಕಾರಿದ್ರು… ಬಿಜೆಪಿ ಆಡಳಿತದಲ್ಲಿ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಇರಲಿ. ಯಾವುದೇ ತನಿಖೆ ಮಾಡಬಹುದು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಐಡಿ ತನಿಖೆ ಮಾಡಬಹುದು ಅಂತ. ನಾನೇ ಹಿಂದೆ ದೂರು ನೀಡಿದ್ದೆ. ಚುನಾವಣಾ ನೀತಿ ಸಂಹಿತೆ ಇದ್ದ ಹಿನ್ನೆಲೆ ಎಫ್‌ಐಆರ್ ಆಗಿರಲಿಲ್ಲ….ಹೊಸ ಸರ್ಕಾರ ಬಂದಿದೆ ಯಾವುದೇ ರೀತಿ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ. ತನಿಖೆ ಪಾರದರ್ಶಕವಾಗಿರಲಿ. ತನಿಖೆ ಕಾಮಗಾರಿಗೆ ಅಡ್ಡಿ ಆಗಬಾರದು. ಟಾರ್ಗೆಟ್ ಮಾಡಿ ಕಾಮಗಾರಿ ಬದಲಾವಣೆ ಮಾಡುವ ದುರುದ್ದೇಶ ಆಗಬಾರದು ಆಕ್ರೋಶ ವ್ಯಕ್ತ ಪಡಿಸಿದ್ರು…
ಇನ್ನೂ ಪಠ್ಯ ಪುಸ್ತಕ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ವಿಚಾರಗಳ ಆಧಾರದ ಮೇಲೆ ಕೆಲವು ಹೊಸದಾಗಿ ಪಠ್ಯಗಳನ್ನು ಪರಿಚಯ ಮಾಡಿದ್ದೆವು. ಅವರು ಅದೇ ಜಾಡನ್ನು ಹಿಡಿದು ಹೊಸ ಸಮಿತಿ ಮಾಡಲು ಹೊರಟಿದ್ದಾರೆ. ಇದಕ್ಕೆ ಸಮಾಜವೇ ಪ್ರತಿಕ್ರಿಯೆ ನೀಡಲಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಪೋಷಕರು ಗಮನಿಸುತ್ತಿದ್ದಾರೆ. ಪಠ್ಯ ಪದೇ ಪದೇ ಬದಲಾವಣೆಯಿಂದ ಮಕ್ಕಳಿಗೆ ಸಮಸ್ಯೆ ಆಗಬಾರದು. ಜವಾಬ್ದಾರಿಯುತ ಸರ್ಕಾರ ಏನು ಮಾಡಲಿದೆ ನೋಡೋಣ ಎನ್.ಇ.ಪಿ ಮೂಲಕ ಈಗ ಮಕ್ಕಳು ಅಧ್ಯಯನ ಶುರು ಮಾಡಿದ್ದಾರೆ. ಎನ್.ಇ.ಪಿ ಮಾಡುವಾಗಲೇ ಸಮಿತಿ ಮಾಡಿ, ರಾಜ್ಯದ ಅಭಿಪ್ರಾಯ ತೆಗೆದುಕೊಳ್ಳಲಾಗಿದೆ. ಎಲ್ಲಾ ತಜ್ಞರ ಅಭಿಪ್ರಾಯ ಪಡೆದು ಎನ್.ಇ.ಪಿ ಜಾರಿಗೆ ತರಲಾಗಿದೆ ಎಂದು ಸ್ಪಷ್ಟನೆ ನೀಡಿದ್ರು…..
ವರದಿ : ರೇಣುಕಾ ಕೆ