ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದಿನಿಂದ ಎರಡು ದಿನ ಮೈಸೂರು, ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10 ಗಂಟೆಗೆ HAL ನಿಂದ ಮೈಸೂರಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತ ಮತ್ತು 150 ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆ ಸಭೆ ಮಾಡಲಿದ್ದಾರೆ.
ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತಿನಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿನಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಮತ್ತು ಸಾರ್ವಜನಿಕ ಸಭೆ ಮುಗಿಸಿ ಇಂದು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಜ. 25 ರಂದು ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದು, ಕೊಡಗಿನಲ್ಲಿ ಕಾನೂನು ಸಲಹೆಗಾರ/ಶಾಸಕ ಎ.ಎಸ್ ಪೊನ್ನಣ್ಣ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.