ಮಂಡ್ಯ : ಹನುಮ ಧ್ವಜ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕೆರಗೋಡು ಗ್ರಾಮದಲ್ಲಿ ಬೂದಿಮುಚ್ಚಿದ ಕೆಂಡದಂತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಭಂಗ ತರುವ ಪೋಸ್ಟ್ ನಿಷೇಧಿಸಿ ಮಂಡ್ಯ ಜಿಲ್ಲಾಡಳಿ ಆದೇಶ ಹೊರಡಿಸಿದೆ.
ಕೆರಗೋಡು ಧ್ವಜಸ್ತಂಭದ ವಿಚಾರ ಸೂಕ್ಷ್ಮವಾಗಿದೆ. ಈ ಸಂಬಂಧ ಯಾರೇ ಆಗಲಿ ಸಾಮಾಜಿಕ ಜಾಲತಾಣದಲ್ಲಿ ಸಮಾಜಿಕ ಸ್ವಾಸ್ಥ್ಯಕ್ಕೆ ಭಂಗ ತರುವ ಪೋಸ್ಟ್ ಮಾಡಬಾರದು. ಪ್ರಚೋದನಕಾರಿ ಹೇಳಿಕೆಗಳು, ವಿಡಿಯೋ, ಉದ್ರೇಕಕಾರಿ ಭಾಷಣ ಹಾಕುವಂತಿಲ್ಲ. ಒಂದು ವೇಳೆ ನಿಯಮ ಮೀರಿದರೆ ಅಂತಹವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳವುದಾಗಿ ಎಚ್ಚರಿಕೆ ನೀಡಿದೆ.
ಇನ್ನೂ ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜ ತೆರವುಗೊಳಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಫೆಬ್ರವರಿ 9ರಂದು ಮಂಡ್ಯ ಬಂದ್ಗೆ ಕರೆ ನೀಡಲಾಗಿದೆ. ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹೋರಾಟವನ್ನು ಆರಂಭಿಸಿವೆ. ಮತ್ತೊಂದು ಕಡೆ ಕಾಂಗ್ರೆಸ್ ಕೂಡ ರಾಷ್ಟ್ರ ಧ್ವಜವನ್ನು ಹಾರಿಸುವುದಾಗಿ ಹೇಳಿ ತಿರುಗೇಟು ನೀಡಿದೆ.