State News

ನಕಲಿ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ದಾಳಿ..!

ಕಲಬುರಗಿ : ಮಹಾಮಾರಿ ಕೊರೊನಾ ಬಂದು ಹೋದದ್ದೇ ತಡ ಹಣ ಮಾಡಲು ಕಳ್ಳದಾರಿ ಹಿಡಿಯುವವರ ಸಂಖ್ಯೆ ಹೆಚ್ಚಾಗಿದೆ. ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದೆ. ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ನಕಲಿ ವೈದ್ಯರ ಕ್ಲಿನಿಕ್​ಗಳ ಮೇಲೆ ದಾಳಿ ನಡೆಸಿದ್ದು 109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.

ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. KPME ಅನುಮತಿ ಪಡೆಯದೆ ರಾಜಾರೋಷವಾಗಿ ಜನರಿಗೆ ಚಿಕಿತ್ಸೆ ನೀಡಿ ಜನರ ಜೀವನದ ಜೊತೆ ಆಟ ಆಡುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಆರೋಗ್ಯ ಇಲಾಖೆ, ತಹಶೀಲ್ದಾರ್, ಪೊಲೀಸ್ ಟೀಂ ರಚಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಕಲಬುರಗಿ ಜಿಲ್ಲೆಯಲ್ಲಿ 109 ನಕಲಿ ವೈದ್ಯರು ಪತ್ತೆಯಾಗಿದ್ಧಾರೆ.

ಅಧಿಕಾರಿಗಳು ನಕಲಿ ವೈದ್ಯರ ಕ್ಲಿನಿಕ್​ಗಳ ಮೇಲೆ ದಾಳಿ ನಡೆಸಿದ್ದು ಭರ್ಜರಿ ಭೇಟೆಯಾಡಿದ್ದಾರೆ. ಜಿಲ್ಲೆಯಲ್ಲಿ 109 ನಕಲಿ ವೈದ್ಯರನ್ನು ಪತ್ತೆ ಮಾಡಿ 43 ಕ್ಲಿನಿಕ್​ಗಳನ್ನ ಬಂದ್ ಮಾಡಿಸಿದ್ದಾರೆ. KPME ಅನುಮತಿ ಪಡೆಯದೆ ಚಿಕಿತ್ಸೆ ನೀಡ್ತಿರುವ ಕ್ಲಿನಿಕ್​ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ನೀಡಿದ ಮೇಲೂ ಅನುಮತಿ ಪಡೆಯದಿದ್ರೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ‌ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!