ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಡಿ.20ರ ತನಕ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರತ್ಯೇಕ ಸ್ಥಳದಲ್ಲಿ ಮಳೆಯಾಗಲಿದೆ. ಮಲೆನಾಡಿನ ಹಾಸನ, ಶಿವಮೊಗ್ಗ, ಕೊಡಗು ಭಾಗದಲ್ಲೂ ಜಿಟಿ ಜಿಟಿ ಮಳೆ ಇರಲಿದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರದಲ್ಲಿ ಮಳೆಯ ಸಿಂಚನವಾಗಲಿದೆ.
ದಕ್ಷಿಣ ಒಳನಾಡಿನಲ್ಲಿ ಇನ್ನೊಂದು ವಾರವೂ ಮಳೆ ಸುರಿಯಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರದಲ್ಲೂ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿ ವೇಳೆ ಕೆಲವು ಪ್ರದೇಶಗಳಲ್ಲಿ ಅತಿ ಹಗುರದೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.