ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯೆತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ ತಿಂಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ದಿಕ್ಕಿನಿಂದ ಬೀಸುವ ಗಾಳಿಯಲ್ಲಿ ತೇವಾಂಶ ಹೆಚ್ಚಿನ ಪ್ರಮಾಣದಲ್ಲಿರಲಿದೆ. ಹೀಗಾಗಿ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನ.9ರ ವರೆಗೂ ಮಳೆ ಪ್ರಮಾಣ ಹೆಚ್ಚಿರಲಿದೆ. ಮಂಗಳೂರು, ಶಿವಮೊಗ್ಗ, ಬೆಳಗಾವಿ, ಉಡುಪಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ನವೆಂಬರ್ 4ರಿಂದ ಕರಾವಳಿ, ಪಶ್ಚಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಮಳೆಯಾಗಲಿದೆ. ಇಡೀ ರಾಜ್ಯದಲ್ಲಿ 3 ವಾರಗಳಿಗೆ ವಾಡಿಕೆಯಷ್ಟು ಮಳೆಯಾಗಬಹುದು. ಬೆಂಗಳೂರು ಸುತ್ತಮುತ್ತ ಮೂರು ದಿನ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನ ಮಳೆಯಾಗೋ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.