ಬೆಂಗಳೂರು: ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಗುಡುಗು ಗಾಳಿ ಸಹಿತ ಮೂರು ದಿನಗಳ ಕಾಲ ಭಾರಿ ಮಳೆಯಾಗುತ್ತದೆ ಎಂದು ಹೇಳಿದೆ. ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.
ಇನ್ನು ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಮಂಗಳವಾರ ಹಾಗೂ ಬುಧವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.