ಉತ್ತರಾಖಂಡ : ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಸ್ಥಗಿತ ಮಾಡಲಾಗಿದೆ ಎಂದು ರುದ್ರಪ್ರಯಾಗದ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಮಾಹಿತಿ ನೀಡಲಾಗಿದೆ.
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಮುಂದಿನ ಆದೇಶದವರೆಗೆ ಕೇದಾರನಾಥ ಯಾತ್ರೆಯನ್ನು ಸೋನ್ಪ್ರಯಾಗದಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಮಹತ್ವದ ಆದೇಶ ನೀಡಲಾಗಿದೆ. ಅಲ್ಲದೇ ಕಳೆದ 24 ಗಂಟೆಗಳಲ್ಲಿ ಹರಿದ್ವಾರದಲ್ಲಿ 78 ಮಿಮೀ ಮಳೆಯಾಗುತ್ತಿದೆ. ಡೆಹ್ರಾಡೂನ್ (33.2) ಮತ್ತು ಉತ್ತರಕಾಶಿ (27.7) ಮಳೆ ಸುರಿಯುತ್ತಿದೆ ಎಂದು ಹವಮಾನ ಇಲಾಖೆ ಈಗಾಗಲೇ ಮುನ್ಚೂಚನೆ ನೀಡಿದೆ.