ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ- ಜೆಡಿಎಸ್ ನಾಯಕರ ಹೈವೋಲ್ಟೇಜ್ ಸಭೆ ಆರಂಭವಾಗಿದೆ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಾಗಿದ್ದು, ಸಭೆಯಲ್ಲಿ ಬಿಜೆಪಿ ಕಡೆಯಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ,
ಮಾಜಿ ಸಿಎಂ ಗಳಾದ ಸದಾನಂದಗೌಡ, ಬಸವರಾಜ ಬೊಮ್ಮಾಯಿ, ವಿಪಕ್ಷನಾಯಕ ಆರ್.ಅಶೋಕ್, ಅಶ್ವಥ್ ನಾರಾಯಣ, ಗೋವಿಂದ ಕಾರಜೋಳ, ಜೆಡಿಎಸ್ ಕಡೆಯಿಂದ ನಿಖಿಲ್ ಕುಮಾರಸ್ವಾಮಿ, ಶಾಸಕರಾದ ಜಿಟಿ ದೇವೇಗೌಡರ, ಬಂಡೆಪ್ಪ ಕಾಶಂಪೂರ್, MLC ಭೋಜೇಗೌಡ, ತಿಪ್ಪೇಸ್ವಾಮಿ ಭಾಗಿಯಾಗಿದ್ದಾರೆ.